ಸುವಾರ್ತೆಯ ಯಶಸ್ಸು ಅಥವಾ ವೈಫಲ್ಯವು ದೇವರಲ್ಲಿ ನಮಗಿರುವ ನಂಬಿಕೆಯ ಮೇಲೆ ಅವಲಂಬಿತವಾಗಿದೆ. ಗಿದ್ಯೋನ ಮತ್ತು ಯೆಹೋಶುವನ ಸಮಯದ ಯುದ್ಧಗಳಲ್ಲಿ ದೇವರು ತೋರಿಸಿಕೊಟ್ಟಂತೆ, ಪರಿಸರ ಮತ್ತು ಪರಿಸ್ಥಿತಿಗಳಿಂದ ನಂಬಿಕೆ ಅಲುಗಾಡುವವರನ್ನು ದೇವರ ಸೈನ್ಯದಿಂದ ಹೊರಗಿಡಲಾಗುತ್ತದೆ ಮತ್ತು ದೇವರಲ್ಲಿ ದೃಢ ನಂಬಿಕೆಯನ್ನು ಹೊಂದಿರುವವರನ್ನು ಮಾತ್ರ ವಿಜಯದ ಇತಿಹಾಸವನ್ನು ಬರೆಯಲು ಬಳಸಲಾಗುತ್ತದೆ.
ದೇವರು ಪ್ರತಿಯೊಂದು ಯುಗವನ್ನೂ ಯಾವುದೇ ಮನುಷ್ಯನು ಊಹಿಸಲಾಗದ ರೀತಿಯಲ್ಲಿ ಮುನ್ನಡೆಸಿದ್ದಾರೆ. ಪವಿತ್ರಾತ್ಮನ ಕಾಲದಲ್ಲಿಯೂ, “ಲೋಕವನ್ನು ರಕ್ಷಿಸಿರಿ” ಎಂಬ ಕ್ರಿಸ್ತ ಅನ್ ಸಂಗ್ ಹೊಂಗ್ ರವರು ಮತ್ತು ತಾಯಿ ದೇವರ ವಾಕ್ಯವನ್ನು ಸಂಪೂರ್ಣವಾಗಿ ನಂಬಿದಾಗ, ಪರಲೋಕ ಸುವಾರ್ತೆಯನ್ನು ಪೂರ್ಣಗೊಳಿಸುವ ಪರಲೋಕ ಸೈನ್ಯದ ಧ್ಯೇಯವನ್ನು ನಾವು ಪೂರ್ಣಗೊಳಿಸುತ್ತೇವೆ.
ಕ್ರಿಸ್ತ ಯೇಸುವಿನ ಒಳ್ಳೇ ಸೈನಿಕನಂತೆ ನನ್ನೊಂದಿಗೆ ಶ್ರಮೆಯನ್ನನುಭವಿಸು. ಯುದ್ಧಕ್ಕೆ ಹೋಗುವ ಸೈನಿಕನು ಲೋಕ ವ್ಯವಹಾರದಲ್ಲಿ ಸಿಕ್ಕಿಕೊಳ್ಳದೆ ತನ್ನನ್ನು ಸೈನ್ಯದಲ್ಲಿ ಸೇರಿಸಿಕೊಂಡವನನ್ನು ಮೆಚ್ಚಿಸುವದಕ್ಕೆ ಪ್ರಯಾಸ ಪಡುತ್ತಿರುವನಲ್ಲವೇ. 2 ತಿಮೊಥೆಯನಿಗೆ 2:3–4
ಆಗ ಯೇಸು ಹತ್ತರಕ್ಕೆ ಬಂದು - ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ. ಆದ್ದರಿಂದ ನೀವು ಹೊರಟುಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ; ಅವರಿಗೆ ತಂದೆಯ, ಮಗನ, ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿ ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಕಾಪಾಡಿಕೊಳ್ಳುವದಕ್ಕೆ ಅವರಿಗೆ ಉಪದೇಶ ಮಾಡಿರಿ. ನೋಡಿರಿ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿವಸ ನಿಮ್ಮ ಸಂಗಡ ಇರುತ್ತೇನೆ ಎಂದು ಹೇಳಿದನು. ಮತ್ತಾಯನು 28:18–20
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ