ನಾವು ಮೃಗಕ್ಕೆ ಸೇರಿದವರಾಗಿದ್ದರೆ, ನಾವು ಮೃಗದ ಗುರುತು ಹೊಂದುತ್ತೇವೆ,
ಅದು ನರಕದ ಶಿಕ್ಷೆಗೆ ಕಾರಣವಾಗುತ್ತದೆ. ಯೇಸುವಿನ ಹೊಸ ಹೆಸರಾದ ಕ್ರಿಸ್ತ ಅನ್ ಸಂಗ್ ಹೊಂಗ್
ಮತ್ತು ಹೊಸ ಯೆರೂಸಲೇಮ್ ಪರಲೋಕದ ತಾಯಿಯನ್ನು ನಾವು ಅರಿತುಕೊಂಡು
ಅವರಲ್ಲಿ ದೃಢವಾದ ನಂಬಿಕೆಯನ್ನು ಹೊಂದಿದಾಗ ನಾವು ದೇವರಿಂದ ರಕ್ಷಣೆಯ ಗುರುತನ್ನು ಸ್ವೀಕರಿಸುತ್ತೇವೆ.
ಪಸ್ಕಹಬ್ಬ ಸೇರಿದಂತೆ ಆತನ ಆಜ್ಞೆಗಳ ಮೂಲಕ ಸೂರ್ಯನು ಉದಯಿಸುವ
ಭೂಮಿಯ ಕಟ್ಟಕಡೆಯ ಕೊರಿಯಾದಿಂದ ಪ್ರಾರಂಭಿಸಿ ತನ್ನ ಮಕ್ಕಳ ಹಣೆಯ ಮೇಲೆ
ಆತನ ಮುದ್ರೆಯನ್ನು ಹಾಕುವುದು ದೇವರ ಮಹಾನ್ ಕೆಲಸವಾಗಿದೆ ಎಂದು ಸತ್ಯವೇದ ಪ್ರವಾದಿಸುತ್ತದೆ.
ಸಮುದ್ರದಿಂದ ಮೃಗವು ಏರಿಬರುವದನ್ನು ಕಂಡೆನು. . . ಅದಕ್ಕೆ ಘಟಸರ್ಪನು ಶಕ್ತಿಯನ್ನೂ ಸಿಂಹಾಸನವನ್ನೂ ಮಹಾ ಅಧಿಕಾರವನ್ನೂ ಕೊಟ್ಟನು. . . ಎಲ್ಲರೂ ತಮ್ಮ ತಮ್ಮ ಬಲಗೈಯ ಮೇಲಾಗಲಿ ಹಣೆಯ ಮೇಲಾಗಲಿ ಗುರುತು ಹೊಂದಬೇಕೆಂತಲೂ ಆ ಗುರುತು ಯಾರಿಗಿಲ್ಲವೋ ಅವರು ಕ್ರಯ ವಿಕ್ರಯಗಳನ್ನು ನಡಿಸಕೂಡದೆಂತಲೂ ಆಜ್ಞೆಮಾಡುತ್ತದೆ.
ಆ ಗುರುತು ಯಾವದಂದರೆ ಮೊದಲನೆಯ ಮೃಗದ ಹೆಸರು ಅಥವಾ ಅದರ ಹೆಸರನ್ನು ಸೂಚಿಸುವ ಅಂಕೆ.
ಪ್ರಕಟನೆ 13:1-17
ಇದಲ್ಲದೆ ಮತ್ತೊಬ್ಬ ದೇವದೂತನು ಜೀವಸ್ವರೂಪನಾದ ದೇವರ ಮುದ್ರೆಯನ್ನು ಹಿಡುಕೊಂಡು ಮೂಡಣ ದಿಕ್ಕಿನಿಂದ ಏರಿಬರುವದನ್ನು ಕಂಡೆನು. ಅವನು ಭೂವಿುಯನ್ನೂ ಸಮುದ್ರವನ್ನೂ ಕೆಡಿಸುವದಕ್ಕೆ ಅಧಿಕಾರಹೊಂದಿದ ಆ ನಾಲ್ಕು ಮಂದಿ ದೇವದೂತರಿಗೆ - ನಾವು ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ಮುದ್ರೆ ಒತ್ತುವತನಕ ಭೂವಿುಯನ್ನಾಗಲಿ ಸಮುದ್ರವನ್ನಾಗಲಿ ಮರಗಳನ್ನಾಗಲಿ ಕೆಡಿಸಬೇಡಿರಿ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು.
ಪ್ರಕಟನೆ 7:2-3
ಪಿ.ಓ. ಬಾಕ್ಸ್ 119, ಸೊಂಗ್ನಮ್ ಬುಂದಂಗ್ ಅಂಚೆ ಕಛೇರಿ, ಬುಂದಂಗ್-ಗು, ಸೊಂಗ್ನಮ್-ಸಿ, ಗ್ಯಂಗಿ-ದೊ, ಕೊರಿಯಾ
Tel 031-738-5999 Fax 031-738-5998
ಮುಖ್ಯಕಛೇರಿ : ಸುನೆ-ಲೋ 50(ಸುನೆ-ದೊಂಗ್),ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ಪ್ರತಿನಿಧಿ ಸಭೆ : ಪಾಂಗ್ಯೋ ಯಕ್-ಲೋ 35(ಬೆಕ್ ಹ್ಯಾನ್-ದೊಂಗ್ 526), ಬುಂದಂಗ್-ಗು, ಸಂಗ್ನಾಮ್-ಸಿ, ಗ್ಯಾಂಗಿ-ಡೊ
ⓒವರ್ಲ್ಡ್ ಮಿಷನ್ ಸೊಸೈಟಿ ಚರ್ಚ್ ಆಫ್ ಗಾಡ್. ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಗೌಪ್ಯತಾ ನೀತಿ